ಆನೇಕಲ್: ದೊಮ್ಮಸಂದ್ರ ಸರ್ಕಲ್ ಬಳಿ ಬೈಕ್ ಪಲ್ಟಿ, ವಿಡಿಯೋ ವೈರಲ್
ಸಿಲಿಕನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಸಮಸ್ಯೆಗಳಿಂದಾಗಿ ವಾಹನ ಸವಾರರಿಗೆ ಗಂಡಾಂತರ ಎದುರಾಗುತ್ತಲೇ ಇವೆ. ಅಲ್ಲೊಂದು ಇಲ್ಲೊಂದು ಅಪಘಾತಗಳು ನಡೆಯುತ್ತಲೇ ಇವೆ. ಇದೀಗ ಸರ್ಜಾಪುರದ-ದೊಮ್ಮಸಂದ್ರ ಸರ್ಕಲ್ ಬಳಿ ಸಂಪೂರ್ಣವಾಗಿ ಹದಗೆಟ್ಟ ರಸ್ತೆಯಲ್ಲಿ ಬೈಕ್ ಪಲ್ಟಿಯಾದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.
ಆನೇಕಲ್, ಅ.5: ಸಿಲಿಕನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಸ್ತೆ ಸಮಸ್ಯೆಗಳಿಂದಾಗಿ ವಾಹನ ಸವಾರರಿಗೆ ಗಂಡಾಂತರ ಎದುರಾಗುತ್ತಲೇ ಇವೆ. ಅಲ್ಲೊಂದು ಇಲ್ಲೊಂದು ಅಪಘಾತಗಳು ನಡೆಯುತ್ತಲೇ ಇವೆ. ಇದೀಗ ಸರ್ಜಾಪುರದ-ದೊಮ್ಮಸಂದ್ರ ಸರ್ಕಲ್ ಬಳಿ ಸಂಪೂರ್ಣವಾಗಿ ಹದಗೆಟ್ಟ ರಸ್ತೆಯಲ್ಲಿ ಬೈಕ್ ಪಲ್ಟಿಯಾದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.
ಅರ್ಧಕ್ಕೆ ನಿಂತಿರುವ ಫ್ಲೈಒವರ್ ಕಾಮಗಾರಿಯಿಂದ ಅವಾಂತರ ಸೃಷ್ಟಿಯಾಗುತ್ತಿದ್ದು, ನಿತ್ಯ ಇದೇ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ಸಾಲು ಸಾಲು ಅಪಘಾತ ಸಂಭವಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ರಸ್ತೆ ದುರಸ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಮಳೆ ಬಂದರೆ ಸಂಪೂರ್ಣ ಕೆಸರುಮಯವಾಗುವ ರಸ್ತೆ, ಬೇಸಿಗೆಯಲ್ಲಿ ಧೂಳಿನಿಂದ ಕೂಡಿರಿತ್ತದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos