AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್‌ನಲ್ಲಿ ಅಂತರರಾಜ್ಯ ಬೈಕ್ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ 29 ಬೈಕ್‌ಗಳು ವಶಕ್ಕೆ

ಆನೇಕಲ್‌ನಲ್ಲಿ ಅಂತರರಾಜ್ಯ ಬೈಕ್ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ 29 ಬೈಕ್‌ಗಳು ವಶಕ್ಕೆ

ರಾಮು, ಆನೇಕಲ್​
| Edited By: |

Updated on: Oct 12, 2026 | 12:48 PM

Share

ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ತಮಿಳುನಾಡು ಮೂಲದ ಮೂವರು ಅಂತರ್‌ರಾಜ್ಯ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಖದೀಮರು ನಕಲಿ ಕೀ ಬಳಸಿ ಹಾಗೂ ಹ್ಯಾಂಡಲ್ ಲಾಕ್ ಮುರಿದು ಬೈಕ್ ಕದಿಯುತ್ತಿದ್ದ ಆರೋಪಿಗಳಿಂದ 18 ಲಕ್ಷ ರೂಪಾಯಿ ಮೌಲ್ಯದ 29 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆನೇಕಲ್, ಅಕ್ಟೋಬರ್ 12: ಬೆಂಗಳೂರು ಹೊರವಲಯದ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ಅಂತರರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಸುಮಾರು ₹18 ಲಕ್ಷ ಮೌಲ್ಯದ 29 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ರಾಜಶೇಖರ್ (28), ಚರಣ್ ಕುಮಾರ್ (19) ಮತ್ತು ಪವನ್ ಕುಮಾರ್ (21) ಎಂದು ಗುರುತಿಸಲಾಗಿದೆ. ಬೈಕ್ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಕೀಗಳನ್ನು ಬಳಸಿ ಹಾಗೂ ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದರು.

ನಂತರ ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಬೈಕ್ ಕಳ್ಳತನ ಪ್ರಕರಣಗಳ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ ಜಿಗಣಿ ಪೊಲೀಸರು, ಇನ್‌ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಒಟ್ಟು 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More