ಆನೇಕಲ್: ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಧಗಧಗ, 8 ಮಂದಿ ಪ್ರಯಾಣಿಕರು ಜಸ್ಟ್ ಮಿಸ್

Updated on: Dec 08, 2025 | 2:23 PM

: ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ 12 ಗಂಟೆ ಸುಮಾರಿಗೆ ಚಂದಾಪುರದ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ತಕ್ಷಣವೇ ಕೆಳಗಿಳಿದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಬೆಂಗಳೂರು, ಡಿಸೆಂಬರ್ 08: ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ 12 ಗಂಟೆ ಸುಮಾರಿಗೆ ಚಂದಾಪುರದ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ತಕ್ಷಣವೇ ಕೆಳಗಿಳಿದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More