ಆನೇಕಲ್ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

Updated on: Dec 21, 2025 | 2:43 PM

ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕುಡಿದಿದ್ದ ಕಂಟೇನರ್ ಲಾರಿ ಚಾಲಕನೊಬ್ಬ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು ನಾಲ್ವರಿಗೆ ಗಂಭೀರ ಗಾಯಗೊಳಿಸಿದ್ದಾನೆ. 14 ಕಿ.ಮೀ.ಗಳವರೆಗೂ ಪೊಲೀಸರಿಂದ ತಪ್ಪಿಸಿಕೊಂಡು ಹೋದ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದ್ದಿದ್ದು, ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆ ನಂತರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆನೇಕಲ್, ಡಿಸೆಂಬರ್ 21: ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.