ಆನೆ ದಂತ ಕಳ್ಳಸಾಗಣೆ: ಮುತ್ಯಾಲಮಡುವು ಸಮೀಪ ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೇಕಲ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆನೆ ದಂತ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದಾರೆ. ಪ್ರವಾಸಿ ತಾಣ ಮುತ್ಯಾಲಮಡುವು ಸಮೀಪ ಏಳು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಮಿಳುನಾಡು ಮೂಲದ ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯು ಖಚಿತ ಮಾಹಿತಿ ಆಧರಿಸಿ ನಡೆಸಲ್ಪಟ್ಟಿದೆ.
ಆನೇಕಲ್, ನವೆಂಬರ್ 29: ಆನೇಕಲ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಆನೆ ದಂತ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿ, ಏಳು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಪ್ರವಾಸಿ ತಾಣವಾದ ಮುತ್ಯಾಲಮಡುವು ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ವನ್ಯಜೀವಿ ಬೇಟೆ ಮತ್ತು ದಂತ ಹಾಗೂ ಜಿಂಕೆ ಮಾಂಸ ಸಾಗಾಣಿಕೆ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಚರಣೆ ಕೈಗೊಂಡಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
