AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​​ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಆನೇಕಲ್​​ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ರಾಮು, ಆನೇಕಲ್​
| Edited By: |

Updated on: Nov 03, 2026 | 6:52 AM

Share

ಆನೇಕಲ್‌ನ ಜಿಗಣಿ ಸಮೀಪದ ಕುಂಬಾರನಹಳ್ಳಿಯ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಗೆ ಗೋದಾಮಿನಲ್ಲಿದ್ದ ಅಪಾರ ಪ್ರಮಾಣದ ಗುಜರಿ ವಸ್ತುಗಳು ಭಸ್ಮವಾಗಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೂ ಹೆಚ್ಚಿನ ಪ್ರಮಾಣದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.

ಬೆಂಗಳೂರು, ನವೆಂಬರ್ 3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಕುಂಬಾರನಹಳ್ಳಿಯಲ್ಲಿರುವ ಗುಜರಿ ಗೋದಾಮಿನಲ್ಲಿ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಜ್ವಾಲೆಗಳು ವ್ಯಾಪಕವಾಗಿ ಹರಡಿದ್ದರಿಂದ ಗೋದಾಮಿನೊಳಗಿದ್ದ ಅಪಾರ ಪ್ರಮಾಣದ ಗುಜರಿ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಗುಜರಿ ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್, ಕಾಗದ ಸೇರಿದಂತೆ ಸುಲಭವಾಗಿ ಬೆಂಕಿ ಹತ್ತುವಂತಹ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಅಗ್ನಿ ಅವಘಡ ಸಂಭವಿಸಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More