Loading video

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 22, 2025 | 9:54 PM

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹುಸ್ಕೂರಿನ ಗ್ರಾಮದಲ್ಲಿ ಮದ್ದೂರಮ್ಮ ಜಾತ್ರೆಯಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ತೇರು ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಈ ದುರ್ಘಟನೆಯಿಂದ ಜನರಲ್ಲಿ ಆತಂಕ ಮೂಡಿದೆ.

ಆನೇಕಲ್​, ಮಾರ್ಚ್​ 22: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹುಸ್ಕೂರಿನ ಗ್ರಾಮದಲ್ಲಿ ಮದ್ದೂರಮ್ಮ ಜಾತ್ರೆಯಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ತೇರು ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಮೃತ ದುರ್ದೈವಿ ತಮಿಳುನಾಡಿನ ಹೊಸೂರು ಮೂಲದವರಾಗಿದ್ದಾರೆ. ಗಾಯಾಳುಗಳನ್ನು ವಿಮಲಾಲಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಯಿಂದ ಜನರಲ್ಲಿ ಆತಂಕ ಮೂಡಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.