ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯನ್ನು ಗ್ಯಾಂಗ್ ಒಂದು ಮೈ ಕೈ ಮುಟ್ಟಿ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ಭಾನುವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ.
ಬೆಂಗಳೂರು, (ಜೂನ್ 23): ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯನ್ನು ಗ್ಯಾಂಗ್ ಒಂದು ಮೈ ಕೈ ಮುಟ್ಟಿ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ಭಾನುವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ. ಬಳಿಕ, ಓರ್ವ ಯುವಕ ಯುವತಿಯ ಮೈಕೈ ಮುಟ್ಟಿ ಎಳೆದಾಡಿದ್ದಾನೆ. ಆಗ ಯುವತಿ ಸಹ ಪ್ರತಿರೋಧ ತೋರಿದ್ದಾಳೆ.
ಇನ್ನು ದೌರ್ಜನ್ಯಕ್ಕೊಳಗಾದ ಮಹಿಳೆ ದೂರು ಸ್ವೀಕರಿಸಲು ಬನ್ನೇರುಘಟ್ಟ ಪೊಲೀಸರು ವಿಳಂಬ ಮಾಡಿದ್ದು,
ಕಾರಣ ಹೇಳಿ ಮಹಿಳೆಯನ್ನು ಠಾಣೆಯಿಂದ ಕಳುಹಿಸಿದ್ದರು. ಆದ್ರೆ, ಇದೀಗ ಟಿವಿ9ನಲ್ಲಿ ಸುದ್ದಿ ಪ್ರಸಾರ ನಂತರ FIR ಬನ್ನೇರುಘಟ್ಟ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆನೇಕಲ್ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಿ ನೊಂದ ಮಹಿಳೆಯಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಪರಾರಿಯಾಗಿರುವ ಕಾಮುಕರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇನ್ನು ಈ ಘಟನೆ ಬಗ್ಗೆ ಸಂತ್ರಸ್ತೆ ಯುವತಿ ಸ್ಫೋಟಕ ಸಂಗತಿ ಬಿಚ್ಚಿಟ್ಟಿದ್ದಾರೆ.