ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ, ಶಾಲಾ ಕಾಲೇಜುಗಳಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮತ್ತ್ತು ಶಾಲಾ ಕಾಲೇಜುಗಳನ್ನು ಇವತ್ತಿನ ಮಟ್ಟಿಗೆ ಮುಚ್ಚಿ ರಜೆ ಘೋಷಿಸಲಾಗಿದೆ. ರಜೆಯನ್ನು ವಿಸ್ತರಿಸುವ ಸಾಧ್ಯತೆಯೂ ಇದೆ ಯಾಕೆಂದರೆ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ನಿನ್ನೆ ಸಾಯಂಕಾಲ ಬೆಂಗಳೂರು ನಗರದ ಕೆಲ ಪ್ರದೇಶಗಳಲ್ಲೂ ಮಳೆಯಾಗಿದೆ.
ಮಂಗಳೂರು, ಜುಲೈ 17: ಸುಮಾರು ಒಂದು ವಾರದಷ್ಟು ಕಾಲ ಮಾಯಾವಾಗಿದ್ದ ಮಳೆ ಮತ್ತೇ ಸುರಿಯಲಾರಂಭಿಸಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಅದರ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಲ್ಕಿ, ಮೂಡಬಿದಿರೆ, ಉಳ್ಳಾಲ ಮತ್ತು ಬಂಟ್ವಾಳ ತಾಲೂಕುಗಳಲ್ಲಿರುವ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳಿಗೆ ಇವತ್ತು ರಜೆ ಘೋಷಿಸಲಾಗಿದೆ. ಹಾಗೆಯೇ ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

