AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!

ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!

ಭಾವನಾ ಹೆಗಡೆ
|

Updated on: Oct 09, 2026 | 11:05 AM

Share

ಪಿಜಿಸಿಇಟಿ ಎರಡನೇ ಮತ್ತು ಮೂರನೇ ಸುತ್ತಿನ ಕೌನ್ಸಿಲಿಂಗ್ ವಿಳಂಬದಿಂದಾಗಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಚೇರಿ ಮುಂದೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೊದಲ ಸುತ್ತಿನಲ್ಲಿ ಅಲಾಟ್ ಆದ ಕಾಲೇಜು ಇಷ್ಟವಿಲ್ಲದ, ರ್ಯಾಂಕ್‌ಗೆ ಅನುಗುಣವಾಗಿ ಸೀಟು ಸಿಗದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಕೂಡಲೇ ಕೌನ್ಸಿಲಿಂಗ್ ನಡೆಸಿ, ಚಾಯ್ಸ್ ಎಂಟ್ರಿ ಬಿಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಚೇರಿಯ ಮುಂಭಾಗದಲ್ಲಿ ಪಿಜಿಸಿಇಟಿ ವಿದ್ಯಾರ್ಥಿಗಳು 2ನೇ ಹಾಗೂ 3ನೇ ಸುತ್ತಿನ ಕೌನ್ಸಿಲಿಂಗ್ ವಿಳಂಬ ಖಂಡಿಸಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕೌನ್ಸಿಲಿಂಗ್ ತೀವ್ರ ವಿಳಂಬದಿಂದಾಗಿ ಸ್ನಾತಕೋತ್ತರ ಪ್ರವೇಶಾತಿ ನಿರೀಕ್ಷೆಯಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರಗೊಂಡಿದೆ.

ಮೊದಲ ಸುತ್ತಿನಲ್ಲಿ ರ್ಯಾಂಕಿಂಗ್‌ಗೆ ತಕ್ಕಂತೆ ಕಾಲೇಜು ಅಲಾಟ್ ಆಗಿಲ್ಲ. ತಮ್ಮ ರ್ಯಾಂಕ್‌ಗೂ ಅಲಾಟ್ ಆದ ಕಾಲೇಜಿಗೂ 3,000 ಅಂತರವಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಟುಗಳು ಲಭ್ಯವಿದ್ದರೂ ಕೆಇಎ ಸುಪ್ರೀಂ ಕೋರ್ಟ್ ನೆಪವೊಡ್ಡಿ ವಿಳಂಬ ಮಾಡುತ್ತಿದೆ. ಒಂದು ವಾರದಿಂದ ಅಲೆದಾಡಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ, ತಕ್ಷಣವೇ 2ನೇ ಸುತ್ತಿನ ಕೌನ್ಸಿಲಿಂಗ್ ನಡೆಸಿ ಚಾಯ್ಸ್ ಎಂಟ್ರಿಗೆ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ಪಿಜಿಸಿಇಟಿ ಎರಡನೇ ಮತ್ತು ಮೂರನೇ ಸುತ್ತಿನ ಕೌನ್ಸಿಲಿಂಗ್ ವಿಳಂಬದಿಂದಾಗಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಚೇರಿ ಮುಂದೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೊದಲ ಸುತ್ತಿನಲ್ಲಿ ಅಲಾಟ್ ಆದ ಕಾಲೇಜು ಇಷ್ಟವಿಲ್ಲದ, ರ್ಯಾಂಕ್‌ಗೆ ಅನುಗುಣವಾಗಿ ಸೀಟು ಸಿಗದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಕೂಡಲೇ ಕೌನ್ಸಿಲಿಂಗ್ ನಡೆಸಿ, ಚಾಯ್ಸ್ ಎಂಟ್ರಿ ಬಿಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More