IPL 2025: 6,6,6,6,6,6.. 74 ರನ್..! ಅನಿಕೇತ್ ಅಬ್ಬರಕ್ಕೆ ದಂಗಾದ ಡೆಲ್ಲಿ; ವಿಡಿಯೋ
Aniket Varma's Stunning IPL Debut: ಚೊಚ್ಚಲ ಐಪಿಎಲ್ ಆಡುತ್ತಿರುವ ಅನಿಕೇತ್ ವರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 41 ಎಸೆತಗಳಲ್ಲಿ 74 ರನ್ ಗಳಿಸಿದರು. ಇದು ಅವರ ಐಪಿಎಲ್‌ನ ಮೊದಲ ಅರ್ಧಶತಕವಾಗಿದೆ. ತಮ್ಮ ಭರ್ಜರಿ ಆಟದಿಂದ ಅನಿಕೇತ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.
ಐಪಿಎಲ್‌ನ ವಿಶಿಷ್ಟತೆ ಏನೆಂದರೆ, ಇಲ್ಲಿ ಯುವ ಮತ್ತು ಅಪರಿಚಿತ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಸಿಗುತ್ತದೆ. ಪ್ರತಿ ಸೀಸನ್ನಲ್ಲೂ ಅನೇಕ ಹೊಸ ಆಟಗಾರರು ಆಡುವ ಅವಕಾಶಗಳನ್ನು ಪಡೆಯುತ್ತಾರೆ. ಅವರಲ್ಲಿ ಕೆಲವರು ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಯಶಸ್ವಿ ಕೂಡ ಆಗುತ್ತಾರೆ. ಟ್ರಾವಿಸ್ ಹೆಡ್, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಹೆನ್ರಿಕ್ ಕ್ಲಾಸೆನ್ ಅವರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳಿಂದ ತುಂಬಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಐಪಿಎಲ್ಗೆ ಪಾದಾರ್ಪಣೆ ಮಾಡಿದ ಅನಿಕೇತ್ ವರ್ಮಾ, ತಾವು ಆಡಿದ ಮೂರನೇ ಪಂದ್ಯದಲ್ಲೇ ಅದ್ಭುತ ಅರ್ಧಶತಕ ಬಾರಿಸಿ ಸಖತ್ ಸದ್ದು ಮಾಡಿದ್ದಾರೆ.
ಹೈದರಾಬಾದ್ಗೆ ಆರಂಭಿಕ ಆಘಾತ
ಮಾರ್ಚ್ 30 ರ ಭಾನುವಾರ ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ, ಮೊದಲು ಬೌಲಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್‌ನ ಅಗ್ರ ಕ್ರಮಾಂಕವನ್ನು ಬಹುಬೇಗನೇ ಕೆಡವಿತು. ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಸುಲಭವಾಗಿ ಔಟಾದರು. ಟ್ರಾವಿಸ್ ಹೆಡ್ ಕೂಡ ಕೆಲವು ಬೌಂಡರಿಗಳನ್ನು ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಕೂಡ ವಿಶೇಷವಾದದ್ದೇನನ್ನೂ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಹೈದರಾಬಾದ್ ತಂಡ ಕೇವಲ 37 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆ ಸಮಯದಲ್ಲಿ 23 ವರ್ಷದ ಅನಿಕೇತ್ ವರ್ಮಾ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡು ಸಿಕ್ಸರ್‌ಗಳು ಮತ್ತು ಬೌಂಡರಿಗಳ ಮಳೆ ಸುರಿಸಿದರು.
ಅನಿಕೇತ್ ಸ್ಫೋಟಕ ಅರ್ಧಶತಕ
ಅನಿಕೇತ್ ವರ್ಮಾ ಲಕ್ನೋ ವಿರುದ್ಧದ ಪಂದ್ಯದಲ್ಲಿ 36 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಇದೀಗ ಡೆಲ್ಲಿ ವಿರುದ್ಧ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು, ಇದರಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿವೆ. ಇದು ಐಪಿಎಲ್‌ನಲ್ಲಿ ಅನಿಕೇತ್ ಅವರ ಮೊದಲ ಅರ್ಧಶತಕವಾಗಿತ್ತು. ತಮ್ಮ ಅರ್ಧಶತಕವನ್ನು ಪೂರ್ಣಗೊಳಿಸಿದ ನಂತರ, ಈ ಬ್ಯಾಟ್ಸ್‌ಮನ್ ಅಕ್ಷರ್ ಪಟೇಲ್ ವಿರುದ್ಧ ಸತತ ಎಸೆತಗಳಲ್ಲಿ ಒಂದು ಬೌಂಡರಿ, ಒಂದು ಸಿಕ್ಸರ್ ಮತ್ತು ಒಂದು ಸಿಕ್ಸರ್ ಬಾರಿಸಿದರು. ಆದಾಗ್ಯೂ, ಅವರು ತಮ್ಮ ಶತಕವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. 16 ನೇ ಓವರ್‌ನಲ್ಲಿ ಬೌಂಡರಿಯಲ್ಲಿ ಮೆಗ್ಕುರ್ಕ್ ಅದ್ಭುತ ಕ್ಯಾಚ್ ಹಿಡಿದ ಕಾರಣ ಅನಿಕೇತ್ ಇನ್ನಿಂಗ್ಸ್ ಅಂತ್ಯವಾಯಿತು. ಅನಿಕೇತ್ ಕೇವಲ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳಿಂದ 74 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
