ದಿಢೀರ್ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಅನಿಲ್ ಕುಂಬ್ಳೆ

Updated By: Ganapathi Sharma

Updated on: Oct 16, 2025 | 12:16 PM

ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ರಾಯಭಾರಿಯಾಗಿರುವ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ನಂತರ ಆ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ನೀಡಿದ್ದಾರೆ. ಅನಿಲ್ ಕುಂಬ್ಳೆ ಹಾಗೂ ಡಿಕೆಶಿ ಭೇಟಿಯ ವಿಡಿಯೋ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 16: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಗುರುವಾರ ದಿಢೀರ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಕೆ ಶಿವಕಮಾರ್ ಭೇಟಿಯಾಗಿ ಚರ್ಚೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಂಬ್ಳೆ, ವನ್ಯಜೀವಿ ರಾಯಭಾರಿಯಾದ ನಂತರ ಅಧಿಕೃತವಾಗಿ ಡಿಸಿಎಂ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ ಇಂದು ಭೇಟಿಯಾಗಿ ‌ಅಭಿನಂದನೆ ಸಲ್ಲಿಸಿದೆ ಎಂದರು.