ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಕಡೆ ಕಡವೆ, ಜಿಂಕೆ ಶಿಕಾರಿ

Edited By:

Updated on: Sep 09, 2026 | 7:33 PM

ಕಾವೇರಿ ವನ್ಯಜೀವಿಧಾಮದ ಹೂಗ್ಯ ಶಾಖೆಯ ಹೊಳೆಮುರಿದಟ್ಟಿ ಅರಣ್ಯದಲ್ಲಿ ಇತ್ತೀಚಿಗೆ ನಡೆದ ಶೂಟೌಟ್‌ ಪ್ರಕರಣ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆ ಕಾಡುಗಳ್ಳರು ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಅರಣ್ಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯನ್ನ ಟಾರ್ಗೆಟ್ ಮಾಡಿರುವ ಕಾಡುಗಳ್ಳರು, ಮೊದಲು ಎಪಿಸಿ ಕ್ಯಾಂಪ್ ಗಳಿಗೆ ಬೆಂಕಿ ಹಚ್ಚಿ ಜಿಲೆಟಿನ್ ಕಡ್ಡಿಯಿಟ್ಟು ಬ್ಲಾಸ್ಟ್ ಮಾಡಿದ್ರು.

ಚಾಮರಾಜನಗರ, ಸೆಪ್ಟೆಂಬರ್ 09): ಕಾವೇರಿ ವನ್ಯಜೀವಿಧಾಮದ ಹೂಗ್ಯ ಶಾಖೆಯ ಹೊಳೆಮುರಿದಟ್ಟಿ ಅರಣ್ಯದಲ್ಲಿ ಇತ್ತೀಚಿಗೆ ನಡೆದ ಶೂಟೌಟ್‌ ಪ್ರಕರಣ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆ ಕಾಡುಗಳ್ಳರು ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಅರಣ್ಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯನ್ನ ಟಾರ್ಗೆಟ್ ಮಾಡಿರುವ ಕಾಡುಗಳ್ಳರು, ಮೊದಲು ಎಪಿಸಿ ಕ್ಯಾಂಪ್ ಗಳಿಗೆ ಬೆಂಕಿ ಹಚ್ಚಿ ಜಿಲೆಟಿನ್ ಕಡ್ಡಿಯಿಟ್ಟು ಬ್ಲಾಸ್ಟ್ ಮಾಡಿದ್ರು. ಈ ಪ್ರಕರಣ ಮಾಸುವ ಮುನ್ನವೇ ಮತ್ತೆ ಒಂದು ವಾರದಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಹಾನೂರು ಬಫರ್ ಝೋನ್ ನಲ್ಲಿ ಎರೆಡು ಬಾರಿ ಕಾಡು ಪ್ರಾಣಿ ಬೇಟೆಯಾಡಿದ್ದಾರೆ.

ಸೆಪ್ಟೆಂಬರ್ 1ರಂದು ಹನೂರು ತಾಲೂಕಿನ ಉಡುತೊರೆ ಹಳ್ಳದ ಬಳಿ ಬೃಹತ್ ಕಡವೆಗೆ ಗುಂಡಿಕ್ಕಿ ಬೇಟೆಯಾಡಿ ಮಾಂಸ ಬೇರ್ಪಡಿಸುವಾಗ ಅರಣ್ಯ ಸಿಬ್ಬಂದಿ ಬರುತ್ತಿದ್ದಂತೆಯೇ ಎಸ್ಕೇಪ್ ಆಗಿದ್ರು. ಈಗ ಮತ್ತೆ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಗಂಡು ಜಿಂಕೆಗೆ ಗುಂಡಿಕ್ಕಿ ಶಿಕಾರಿ ಮಾಡಿದ್ದು ಅರಣ್ಯ ಸಿಬ್ಬಂದಿಯ ಜೀಪ್ ಶಬ್ಧಕೇಳುತ್ತಿದ್ದಂತೆಯೇಮೃತ ಜಿಂಕೆಯ ಎದೆ ಭಾಗವನ್ನ ಹಾಗೂ ಅರ್ಧ ಕತ್ತನ್ನ ಕತ್ತರಿಸಿ ಎಸ್ಕೇಪ್ ಆಗಿದ್ದಾರೆ. ಹೀಗೆ ಎನ್ ಕೌಂಟರ್ ಬಳಿಕ ಕಾಡುಗಳ್ಳರು ಜಿದ್ದಿಗೆ ಬಿದ್ದಿದ್ದು ಪದೇ ಪದೆ ಶಿಕಾರಿಗೆ ಮುಂದಾಗುತ್ತಿರುವುದು ಅರಣ್ಯ ಸಿಬ್ಬಂದಿಯ ನಿದ್ದೆಗೆಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More