AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 25, 2026 | 10:33 AM

Share

ದಾವಣಗೆರೆ ದುರ್ಗಾಂಬಿಕಾ ಜಾತ್ರೆಯು ಅದ್ಧೂರಿಯಾಗಿ ನಡೆಯುತ್ತಿದ್ದು, ಜಿಲ್ಲಾಡಳಿತವು ಪ್ರಾಣಿಬಲಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಡಿಸಿ, ಸಿಇಓ, ಎಸ್ಪಿ ಸೇರಿ ಅಧಿಕಾರಿಗಳು ರಾತ್ರಿಯಿಡೀ ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಸಿಸಿಟಿವಿ ಮತ್ತು ಡ್ರೋನ್‌ಗಳ ಮೂಲಕ ನಿಗಾ ವಹಿಸಲಾಗಿದೆ. ಭಕ್ತರು ಭಕ್ತಿಭಾವದಿಂದ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ದಾವಣಗೆರೆ, ಫೆಬ್ರವರಿ 25: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ. ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು ಅತ್ಯಂತ ಭಕ್ತಿಪರವಶರಾಗಿ, ಮೂಢನಂಬಿಕೆಗಳಿಂದ ದೂರವಾಗಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಡಿಸಿ ಹಾಗೂ ಎಸ್​​ಪಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us