ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ: ಅನಿರುದ್ಧ್ ಸಂತಸ
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅವರ ಅಳಿಯ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣುವರ್ಧನ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಭೇಟಿ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಪುಣ್ಯಭೂಮಿ ಉಳಿಸಿಕೊಳ್ಳಲು 10 ಗುಂಟೆ ಜಾಗ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಇಂದು (ಸೆ.3) ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣುವರ್ಧನ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆದಿದೆ. ಅಭಿಮಾನ್ ಸ್ಟುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಪುಣ್ಯಭೂಮಿ ಉಳಿಸಿಕೊಳ್ಳಲು 10 ಗುಂಟೆ ಜಾಗ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಈ ವೇಳೆ ಅವರು ಇನ್ನೊಂದು ಪ್ರಮುಖ ವಿಚಾರ ಪ್ರಸ್ತಾಪಿಸಿದರು. ‘ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಬಗ್ಗೆ ಕೂಡ ಸಿಎಂ ಬಳಿ ಚರ್ಚೆ ಆಯಿತು. ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದಾರೆ. ನಾಳೆ (ಸೆಪ್ಟೆಂಬರ್ 4) ಕ್ಯಾಬಿನೆಟ್ ಮೀಟಿಂಗ್ ಬಳಿಕ ಘೋಷಣೆ ಕೂಡ ಆಗಬಹುದು’ ಎಂದು ಅನಿರುದ್ಧ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

