ಅನಿತಾ ಕುಮಾರಸ್ವಾಮಿಯನ್ನು ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿಯಾಗಿಸುವ ಸಾಧ್ಯತೆ ಇದೆಯೇ?
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ ಎಂದ ಸಚಿವ ಚಲುವರಾಯಸ್ವಾಮಿ, ಆ ಪಕ್ಷಗಳ ನಾಯಕರು ಕಿವಿಯಲ್ಲಿ ಹೂವು ಇಟ್ಟುಕೊಂಡಿದ್ದಾರೆಯೇ? ಅಥವಾ ಎರಡು ಪಕ್ಷಗಳ ಮೈತ್ರಿ ಅಷ್ಟು ದುರ್ಬಲವೇ ಎಂದು ಪ್ರಶ್ನಿಸಿದರು.
ಮಂಡ್ಯ: ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಪಕ್ಷದ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದರು. ಯೋಗೇಶ್ವರ್ ಅಲ್ಲದೆ, ಕುಮಾರಸ್ವಾಮಿಯವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಇಲ್ಲವೇ ಒಕ್ಕಲಿಗ ಮುಖಂಡ ಜಯಮೂರ್ತಿಗೆ ಟಿಕೆಟ್ ಗಿಟ್ಟಿಸಬಹುದಾಗಿದೆ ಎಂದು ಸಚಿವ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್: ಮೈತ್ರಿ ಅಭ್ಯರ್ಥಿ ಫೈನಲ್, ಬಿಜೆಪಿಯ ಯೋಗೇಶ್ವರ್ಗೆ ಜೆಡಿಎಸ್ ಬಿಗ್ ಆಫರ್