ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

Edited By:

Updated on: Dec 24, 2025 | 12:01 PM

ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಗರ್ಭಗುಡಿಯೊಳಗೆ ಅರ್ಚಕ ವಿದ್ಯಾದಾಸ ಬಾಬಾ ಮತ್ತು ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ನಡುವೆ ಜಗಳ ನಡೆದಿದೆ. ಪೂಜಾ ವಿಚಾರದಲ್ಲಿ ಅಡ್ಡಿಪಡಿಸಿದ ಆರೋಪದ ಮೇಲೆ ವಾಗ್ವಾದ ತಾರಕಕ್ಕೇರಿ, ಹೊಡೆದಾಟದ ವರೆಗೆ ತಲುಪಿದೆ. ಅಂಜನಾದ್ರಿಯಂತಹ ಪವಿತ್ರ ಕ್ಷೇತ್ರದಲ್ಲಿ ನಡೆದ ಈ ಘಟನೆ ಭಕ್ತರಲ್ಲಿ ತೀವ್ರ ಆಕ್ರೋಶ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಪ್ಪಳ, ಡಿಸೆಂಬರ್ 24: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಆರೋಪಿಸಿದ್ದಾರೆ.

ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲಿಯೇ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ