ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

Edited By:

Updated on: May 26, 2026 | 1:03 PM

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಮತ್ತು ಗೋಹತ್ಯೆ ತಡೆಯಲು ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆಯು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಅಲ್ಲದೆ ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ.

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us