AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ: ಅಂಕಲಗಿ ಪಟ್ಟಣ ಸಂಪೂರ್ಣ ಸ್ತಬ್ಧ, ಶಾಲಾ ಕಾಲೇಜುಗಳಿಗೆ ರಜೆ

ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ: ಅಂಕಲಗಿ ಪಟ್ಟಣ ಸಂಪೂರ್ಣ ಸ್ತಬ್ಧ, ಶಾಲಾ ಕಾಲೇಜುಗಳಿಗೆ ರಜೆ

Sahadev Mane
| Updated By: ಪ್ರಸನ್ನ ಹೆಗಡೆ|

Updated on:Nov 06, 2025 | 12:16 PM

Share

ಕಬ್ಬಿಗೆ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿರುವ ನಡುವೆ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಂಕಲಗಿ ಸಂಪೂರ್ಣ ಸ್ತಬ್ಧವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಅನ್ನದಾತರನ್ನು ಬೆಂಬಲಿಸಿದ್ದಾರೆ.

ಬೆಳಗಾವಿ, ನವೆಂಬರ್​ 06: ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಪಟ್ಟಣ ಸಂಪೂರ್ಣ ಬಂದ್​ ಆಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಅಂಕಲಗಿ ಪಟ್ಟಣದ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ ಜನ ಸಂಚಾರವಿಲ್ಲದೆ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡುಬಂದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 06, 2025 12:15 PM