ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ: ಅಂಕಲಗಿ ಪಟ್ಟಣ ಸಂಪೂರ್ಣ ಸ್ತಬ್ಧ, ಶಾಲಾ ಕಾಲೇಜುಗಳಿಗೆ ರಜೆ
ಕಬ್ಬಿಗೆ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿರುವ ನಡುವೆ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಂಕಲಗಿ ಸಂಪೂರ್ಣ ಸ್ತಬ್ಧವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಅನ್ನದಾತರನ್ನು ಬೆಂಬಲಿಸಿದ್ದಾರೆ.
ಬೆಳಗಾವಿ, ನವೆಂಬರ್ 06: ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಪಟ್ಟಣ ಸಂಪೂರ್ಣ ಬಂದ್ ಆಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಅಂಕಲಗಿ ಪಟ್ಟಣದ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ ಜನ ಸಂಚಾರವಿಲ್ಲದೆ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡುಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 06, 2025 12:15 PM
