ಅಂಕಿತಾ ಭಂಡಾರಿ ಕೊಲೆ, ಪೋಷಕರ ಪ್ರತಿಭಟನೆಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಥ್: ಸಿಕ್ಕಿಂ ರಾಜ್ಯಪಾಲರ ವಿರುದ್ಧ ಆಕ್ರೋಶ
ಉತ್ತರಾಖಂಡ್ನ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂಕಿತಾ ಪೋಷಕರು ಸಿಕ್ಕಿಂ ರಾಜ್ಯಪಾಲ ದುಷ್ಯಂತ್ ಕುಮಾರ್ ಗೌತಮ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ದುಷ್ಯಂತ್ ಪಾತ್ರದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಆಗುವವರೆಗೂ ಅವರ ನೇಮಕಕ್ಕೆ ತಡೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಈ ಧರಣಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಬೆಂಬಲ ನೀಡಿದ್ದಾರೆ.
ದೆಹಲಿ, ಅಕ್ಟೋಬರ್ 15: ಉತ್ತರಾಖಂಡ್ನ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅಂಕಿತಾ ಅವರ ಪೋಷಕರು ಸಿಕ್ಕಿಂ ರಾಜ್ಯಪಾಲ ದುಷ್ಯಂತ್ ಕುಮಾರ್ ಗೌತಮ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಕಿತಾ ಕೊಲೆ ಪ್ರಕರಣದಲ್ಲಿ ದುಷ್ಯಂತ್ ಕುಮಾರ್ ಗೌತಮ್ ಪಾತ್ರವಿದೆ ಎಂದು ಪೋಷಕರು ಆರೋಪಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಸಿಕ್ಕಿಂ ರಾಜ್ಯಪಾಲರಾಗಿ ಅವರ ನೇಮಕಕ್ಕೆ ತಕ್ಷಣವೇ ತಡೆ ನೀಡಬೇಕು. ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿ ಸತ್ಯ ಹೊರಬರುವವರೆಗೂ ಯಾವುದೇ ನೇಮಕಾತಿ ನಡೆಯಬಾರದು ಎಂದು ಪೋಷಕರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆಗಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಬೆಂಬಲ ಸೂಚಿಸಿ, ಪೋಷಕರೊಂದಿಗೆ ಧರಣಿಯಲ್ಲಿ ಭಾಗವಹಿಸಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುವುದಾಗಿ ಪೋಷಕರು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

