ಅಂಕಿತಾ ಭಂಡಾರಿ ಕೊಲೆ, ಪೋಷಕರ ಪ್ರತಿಭಟನೆಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಥ್: ಸಿಕ್ಕಿಂ ರಾಜ್ಯಪಾಲರ ವಿರುದ್ಧ ಆಕ್ರೋಶ

Updated on: Oct 15, 2026 | 9:11 AM

ಉತ್ತರಾಖಂಡ್‌ನ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂಕಿತಾ ಪೋಷಕರು ಸಿಕ್ಕಿಂ ರಾಜ್ಯಪಾಲ ದುಷ್ಯಂತ್ ಕುಮಾರ್ ಗೌತಮ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ದುಷ್ಯಂತ್ ಪಾತ್ರದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಆಗುವವರೆಗೂ ಅವರ ನೇಮಕಕ್ಕೆ ತಡೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಈ ಧರಣಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಬೆಂಬಲ ನೀಡಿದ್ದಾರೆ.

ದೆಹಲಿ, ಅಕ್ಟೋಬರ್ 15: ಉತ್ತರಾಖಂಡ್‌ನ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅಂಕಿತಾ ಅವರ ಪೋಷಕರು ಸಿಕ್ಕಿಂ ರಾಜ್ಯಪಾಲ ದುಷ್ಯಂತ್ ಕುಮಾರ್ ಗೌತಮ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಕಿತಾ ಕೊಲೆ ಪ್ರಕರಣದಲ್ಲಿ ದುಷ್ಯಂತ್ ಕುಮಾರ್ ಗೌತಮ್ ಪಾತ್ರವಿದೆ ಎಂದು ಪೋಷಕರು ಆರೋಪಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಸಿಕ್ಕಿಂ ರಾಜ್ಯಪಾಲರಾಗಿ ಅವರ ನೇಮಕಕ್ಕೆ ತಕ್ಷಣವೇ ತಡೆ ನೀಡಬೇಕು. ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿ ಸತ್ಯ ಹೊರಬರುವವರೆಗೂ ಯಾವುದೇ ನೇಮಕಾತಿ ನಡೆಯಬಾರದು ಎಂದು ಪೋಷಕರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆಗಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಬೆಂಬಲ ಸೂಚಿಸಿ, ಪೋಷಕರೊಂದಿಗೆ ಧರಣಿಯಲ್ಲಿ ಭಾಗವಹಿಸಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುವುದಾಗಿ ಪೋಷಕರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More