ಕರ್ನಾಟಕದ ಅನ್ನಭಾಗ್ಯ ಅಕ್ಕಿ ದುಬೈನಲ್ಲಿ ಮಾರಾಟವಾಗುತ್ತಿದ್ಯಾ? ಕಾಂಗ್ರೆಸ್-ಬಿಜೆಪಿ ಜಟಾಪಟಿ

Updated on: Dec 08, 2025 | 9:21 PM

ಇಂದಿನಿಂದ ಬೆಳಗಾವಿ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಪರಿಷತ್​ ಕಲಾಪದಲ್ಲಿ ಮೊದಲ ದಿನವೇ ಹಂಗಾಮಾ ನಡೆಯಿತು. ಆಡಳಿತ, ವಿಪಕ್ಷ ನಾಯಕರ ಮಧ್ಯೆ ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟ ಸಂಬಂಧ ಆರೋಪ, ಪ್ರತ್ಯಾರೋಪ ಜೋರಾಗಿಯೇ ನಡೀತು. ಹೌದು..ಅನ್ನಭಾಗ್ಯದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ವಿದೇಶಕ್ಕೂ ರಫ್ತಾಗುತ್ತಿದೆ ಎಂದು ಬಿಜೆಪಿಯ ಸಿಟಿ ರವಿ ಆರೋಪಿಸಿದರು. ದಕ್ಕೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ , ಅದನ್ನು ಪತ್ತೆ ಹಚ್ಚುವ ಕೆಲಸ ಆಗುತ್ತಿದೆ ಎಂದು ಉತ್ತರಿಸಿದರು.

ಬೆಳಗಾವಿ, (ಡಿಸೆಂಬರ್ 08): ಇಂದಿನಿಂದ ಬೆಳಗಾವಿ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಪರಿಷತ್​ ಕಲಾಪದಲ್ಲಿ ಮೊದಲ ದಿನವೇ ಹಂಗಾಮಾ ನಡೆಯಿತು. ಆಡಳಿತ, ವಿಪಕ್ಷ ನಾಯಕರ ಮಧ್ಯೆ ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟ ಸಂಬಂಧ ಆರೋಪ, ಪ್ರತ್ಯಾರೋಪ ಜೋರಾಗಿಯೇ ನಡೀತು. ಹೌದು..ಅನ್ನಭಾಗ್ಯದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ವಿದೇಶಕ್ಕೂ ರಫ್ತಾಗುತ್ತಿದೆ ಎಂದು ಬಿಜೆಪಿಯ ಸಿಟಿ ರವಿ ಆರೋಪಿಸಿದರು. ದಕ್ಕೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ , ಅದನ್ನು ಪತ್ತೆ ಹಚ್ಚುವ ಕೆಲಸ ಆಗುತ್ತಿದೆ ಎಂದು ಉತ್ತರಿಸಿದರು. ಬಳಿಕ ಸಿಟಿ ರವಿ ಮಾತನಾಡಿ, ಈ ಅಕ್ರಮ ಪತ್ತೆಗೆ ಎಸ್​ಐಟಿ ರಚಿಸಿ ಎಂದು ಆಗ್ರಹಿಸಿದರು. ಇನ್ನು ಈ ಅನ್ನಭಾಗ್ಯದ ಅಕ್ಕಿ ಮಾರಾಟ ಸಂಬಂಧ ಆಡಳಿತ ವಿಪಕ್ಷಗಳ ನಡುವೆ ಹೇಗೆ ಕಿತ್ತಾಟವಾಯ್ತು ಎನ್ನುವುದನ್ನು ನೋಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More