ಪುನೀತ್ ರಾಜ್ಕುಮಾರ್ ಮೂರನೇ ಪುಣ್ಯಸ್ಮರಣೆ ನಿಮಿತ್ತ ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತಪರ್ಣೆ
ಅಭಿಮಾನಿ, ಚಿತ್ರರಂಗದವರಿಂದ ಮತ್ತು ಮನೆಯಲ್ಲೂ ಅಪ್ಪು ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್ಕುಮಾರ್ ಸಮಾಧಿಯಿರುವ ಕಂಠೀರವ ಸ್ಟುಡಿಯೋಗೆ ಇವತ್ತು ನಸುಕಿನ ಜಾವದಿಂದಲೇ ಜನ ಬರೋದು ಆರಂಭವಾಗಿತ್ತು. ಅಪ್ಪು ಕುಟುಂಬದ ಸದಸ್ಯರು ಭಾವುಕರಾಗಿದ್ದರು. ರಾಘವೇಂದ್ರ ರಾಜ್ಕುಮಾರ್ ಈಗಲೂ ತಮ್ಮನನ್ನು ನೆನಸಿಕೊಂಡು ಮಗುವಿನಂತೆ ದುಃಖಿಸುತ್ತಾರೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಹಲೋಕದ ಯಾತ್ರೆ ಮುಗಿಸಿ ಕನ್ನಡ ಚಿತ್ರರಂಗವನ್ನು ಬಡವಾಗಿಸಿ ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆಯ ದಿನವಾಗಿರುವ ಇವತ್ತು ಸಹಸ್ರಾರು ಅಭಿಮಾನಿಗಳು ಸಮಾಧಿಗೆ ಭೇಟಿ ನೀಡಿ ಕಣ್ಣೀರು ಸುರಿಸುತ್ತಾ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳ ಸಂಘದಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನೇರವೇರಿಸಲಾಯಿತು. ದೃಶ್ಯಗಳಲ್ಲಿ ಕಾಣುವಂತೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಭೋಜನ ಸೇವಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ ಹೆಸರಿನ ನಗು ಕಳೆದು ಮೂರು ವರ್ಷ; ಅಂದು ನಡೆದಿದ್ದೇನು?
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

