ಪುನೀತ್ ರಾಜ್​ಕುಮಾರ್ ಮೂರನೇ ಪುಣ್ಯಸ್ಮರಣೆ ನಿಮಿತ್ತ ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತಪರ್ಣೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 29, 2024 | 2:50 PM

ಅಭಿಮಾನಿ, ಚಿತ್ರರಂಗದವರಿಂದ ಮತ್ತು ಮನೆಯಲ್ಲೂ ಅಪ್ಪು ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್ ಸಮಾಧಿಯಿರುವ ಕಂಠೀರವ ಸ್ಟುಡಿಯೋಗೆ ಇವತ್ತು ನಸುಕಿನ ಜಾವದಿಂದಲೇ ಜನ ಬರೋದು ಆರಂಭವಾಗಿತ್ತು. ಅಪ್ಪು ಕುಟುಂಬದ ಸದಸ್ಯರು ಭಾವುಕರಾಗಿದ್ದರು. ರಾಘವೇಂದ್ರ ರಾಜ್​ಕುಮಾರ್ ಈಗಲೂ ತಮ್ಮನನ್ನು ನೆನಸಿಕೊಂಡು ಮಗುವಿನಂತೆ ದುಃಖಿಸುತ್ತಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಇಹಲೋಕದ ಯಾತ್ರೆ ಮುಗಿಸಿ ಕನ್ನಡ ಚಿತ್ರರಂಗವನ್ನು ಬಡವಾಗಿಸಿ ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆಯ ದಿನವಾಗಿರುವ ಇವತ್ತು ಸಹಸ್ರಾರು ಅಭಿಮಾನಿಗಳು ಸಮಾಧಿಗೆ ಭೇಟಿ ನೀಡಿ ಕಣ್ಣೀರು ಸುರಿಸುತ್ತಾ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳ ಸಂಘದಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನೇರವೇರಿಸಲಾಯಿತು. ದೃಶ್ಯಗಳಲ್ಲಿ ಕಾಣುವಂತೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಭೋಜನ ಸೇವಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪುನೀತ್ ರಾಜ್​ಕುಮಾರ್ ಹೆಸರಿನ ನಗು ಕಳೆದು ಮೂರು ವರ್ಷ; ಅಂದು ನಡೆದಿದ್ದೇನು?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.