AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ

ನಯನಾ ರಾಜೀವ್
|

Updated on: Dec 24, 2025 | 10:01 AM

Share

ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ.

ಅಯೋಧ್ಯೆ, ಡಿಸೆಂಬರ್ 24: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ, ದಾನಿ ಯಾರೆಂಬುದು ತಿಳಿದಿಲ್ಲ ಎಂದಿದ್ದಾರೆ. ತಿಮೆಯ ತೂಕವನ್ನು ಅಳೆಯಲಾಗುತ್ತಿದೆ, ಆದರೂ ಅದು ಸುಮಾರು ಐದು ಕ್ವಿಂಟಾಲ್‌ಗಳಷ್ಟಿದೆ. ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಡಿಸೆಂಬರ್ 29, 2025 ರಿಂದ ಜನವರಿ 2, 2026 ರವರೆಗೆ ಆಚರಿಸಲಾಗುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ.

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶ್ರೀ ರಾಮ ಅಭಿಷೇಕ, ಶೃಂಗಾರ, ಭೋಗ ಮತ್ತು ಪ್ರಕತ್ಯ ಆರತಿ ಸೇರಿವೆ, ಇವುಗಳನ್ನು ಬೆಳಗ್ಗೆ 9.30 ರಿಂದ ಮಧ್ಯಾಹ್ನ ಆರತಿಯವರೆಗೆ ಗರ್ಭಗುಡಿಯಲ್ಲಿ ನಡೆಸಲಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ