ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡಸದೃಶ ಪಾರು
ಟ್ರ್ಯಾಕ್ಟರ್ ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಅದೇ ತುಂಗಭದ್ರಾ ಸೇತುವೆಯ ಮೇಲೆ ಮತ್ತೊಂದು ಅಪಘಾತ ಸಂಭವಿಸಿದೆ. ಲಾರಿ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿದ್ದು, ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳ, ಮೇ 15: ಟ್ಯಾಂಕರ್ ಗುದ್ದಿದ ಪರಿಣಾಮ ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು ಮಗು ಸೇರಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಅದೇ ತುಂಗಭದ್ರಾ ಸೇತುವೆ ಮೇಲೆ ಮತ್ತೊಂದು ಅಪಘಾತ ನಡೆದಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us