‘ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ’: ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಬಿಗ್ ಶಾಕ್

Updated on: Jun 05, 2026 | 12:29 PM

ಕರ್ನಾಟಕ ಕಾಂಗ್ರೆಸ್ ಸರ್ಕಾರ 2.0 ದಲ್ಲಿ ಖಾತೆ ಹಂಚಿಕೆ ಭಿನ್ನಮತ ತಾರಕಕ್ಕೇರಿದ್ದು, ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ನಾಯಕ ಕೆಎಚ್ ಮುನಿಯಪ್ಪ ತಮಗೆ ನೀಡಿರುವ ಆಹಾರ ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆ ಮೂಲಕ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ದೇವನಹಳ್ಳಿ, ಜೂನ್ 5: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಕೆಎಚ್ ಮುನಿಯಪ್ಪ, ‘ನಾನು ಆಹಾರ ಇಲಾಖೆ ಸಚಿವನಾಗಿ ಅಧಿಕಾರ ಸ್ವೀಕರಿಸುವುದಿಲ್ಲ (ಚಾರ್ಜ್ ತೆಗೆದುಕೊಳ್ಳಲ್ಲ)’ ಎಂದು ಘೋಷಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ‘ನಾನು ಯುಪಿಎ ಕೇಂದ್ರ ಸರ್ಕಾರದಲ್ಲೂ ಸಚಿವನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಆದರೆ ಖಾತೆ ಹಂಚಿಕೆಯಲ್ಲಿ ಆಗಿರುವ ಲೋಪವನ್ನು ಹೈಕಮಾಂಡ್ ನಾಯಕರೇ ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅವರ ಈ ಹಠಾತ್ ನಿರ್ಧಾರ ಡಿಕೆಶಿ ಸಂಪುಟವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More