ಬೆಂಗಳೂರಿನಲ್ಲಿ ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಇದೀಗ ಮತ್ತೊಂದು ಕಟ್ಟಡ ಬಿರುಕು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2024 | 10:02 PM

ಬೆಂಗಳೂರಿನ ಬಸವೇಶ್ವರನಗರದ ಭದ್ರಪ್ಪ ಲೇಔಟ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಕಟ್ಟಡ ಕುಸಿಯುವ ಭೀತಿ ಎದುರಾಗಿದ್ದು, 25 ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 24: ನಗರದಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಬಸವೇಶ್ವರನಗರದ ಭದ್ರಪ್ಪ ಲೇಔಟ್​ನಲ್ಲಿ ಘಟನೆ ಕಂಡುಬಂದಿದೆ. 3 ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ಕಟ್ಟಡದಲ್ಲಿದ್ದ ವಾಸಿಸುತ್ತಿದ್ದ 25 ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಅಕ್ಕಪಕ್ಕದ ಮನೆಯಲ್ಲಿದ್ದವರನ್ನು ಕೂಡ ಸ್ಥಳೀಯರು ಖಾಲಿ ಮಾಡಿಸುತ್ತಿದ್ದಾರೆ. ಸ್ಥಳಕ್ಕೆ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಡಿಯೋ ನೋಡಿ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on