AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jun 17, 2026 | 10:49 PM

Share

ಭಟ್ಕಳದಲ್ಲಿ ಮುಸ್ಲಿಂ ಯುವಕನೊಂದಿಗೆ ತೆರಳುತ್ತಿದ್ದ ಹಿಂದೂ ಯುವತಿಯನ್ನು ಹಿಂದೂ ಸಂಘಟನೆಗಳು ತಡೆದವು. ಬಳಿಕ ಪೊಲೀಸರಿಗೆ ಒಪ್ಪಿಸಿದ ನಾಯಕರ ವಿರುದ್ಧವೇ ಪ್ರಕರಣ ದಾಖಲಾಗಿದ್ದರಿಂದ ಭಟ್ಕಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಕಾಂತ್ ನಾಯ್ಕ್ ಮತ್ತು ಕುಮಾರ್ ನಾಯ್ಕ್ ವಿರುದ್ಧ ಕೇಸ್ ಹಾಕಿದ್ದನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಕಾರವಾರ, ಜೂನ್​​ 17: ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಭಟ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ತಡೆದಿದ್ದಾರೆ. ಭಟ್ಕಳದಿಂದ ಸಾಗರದ ಕಾಡಿನತ್ತ ಕರೆದೊಯ್ಯುತ್ತಿರುವುದು ಏಕೆ ಎಂದು ಮುಖಂಡರ ಪ್ರಶ್ನೆಗೆ ಉತ್ತರಿಸದ ಹಿನ್ನೆಲೆ ಬುದ್ಧಿವಾದ ಹೇಳುವಂತೆ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರಿಗೆ ಒಪ್ಪಿಸಿದ್ದ ಶ್ರೀಕಾಂತ್ ನಾಯ್ಕ್, ಕುಮಾರ್ ನಾಯ್ಕ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಸಂಘಟನೆ ಮುಖಂಡರು ಗರಂ ಆಗಿದ್ದು, ಪ್ರತಿಭಟನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us