ಕುಮಟಾ ತದಡಿ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎರಡೇ ದಿನಗಳಲ್ಲಿ 2ನೇ ಬೋಟ್ ದುರಂತ

Edited By:

Updated on: Aug 18, 2026 | 1:23 PM

Uttara Kannada news: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಲಕ್ಷ್ಮೀ ಕೃಪಾ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಇದರಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದ್ದು, ಸುಮಾರು 20 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಕಳೆದ ಒಂದು ವರ್ಷದಿಂದ ಪದೇಪದೇ ಇಂತಹ ಘಟನೆಗಳು ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ.

ಕಾರವಾರ, ಆಗಸ್ಟ್ 18: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಸುರೇಂದ್ರ ಹರಿಕಾಂತ್ರ ಎಂಬುವವರಿಗೆ ಸೇರಿದ ಲಕ್ಷ್ಮೀ ಕೃಪಾ ಹೆಸರಿನ ಈ ಬೋಟ್, ತದಡಿ ಬಂದರು ಪ್ರದೇಶದಲ್ಲಿ ಮುಳುಗಡೆಗೊಂಡಿದೆ. ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ದುರ್ಘಟನೆಯಿಂದಾಗಿ ಸುಮಾರು 20 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿ ಸಾಕಷ್ಟು ನಷ್ಟ ಉಂಟಾಗಿತ್ತು.

ಕಳೆದೊಂದು ವರ್ಷದಿಂದ ತದಡಿ ಬಂದರಿನಲ್ಲಿ ಪದೇಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಮೀನುಗಾರಿಕಾ ಸಮುದಾಯದಲ್ಲಿ ಆತಂಕ ಮನೆ ಮಾಡಿದೆ. ಬೋಟ್‌ಗಳ ಮುಳುಗಡೆಯಿಂದ ಮೀನುಗಾರರಿಗೆ ಭಾರಿ ಆರ್ಥಿಕ ನಷ್ಟವಾಗುತ್ತಿದೆ. ಈ ಪ್ರದೇಶದಲ್ಲಿ ಪದೇಪದೆ ಈ ಘಟನೆಗಳು ಮರುಕಳಿಸುವುದಕ್ಕೆ ಕಾರಣಗಳ ಬಗ್ಗೆ ಪರಿಶೀಲನೆ ನಡೆಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More