ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು

Updated on: Jan 01, 2026 | 8:12 PM

ಬಾಂಗ್ಲಾದೇಶದ ಶರಿಯತ್‌ಪುರ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಹೊಸ ಕಳವಳ ವ್ಯಕ್ತಪಡಿಸಿದೆ. ಈ ಹಲ್ಲೆಯಲ್ಲಿ ಆ ವ್ಯಕ್ತಿಗೆ ತೀವ್ರ ಗಾಯಗಳಾಗಿವೆ. ಬಾಂಗ್ಲಾದೇಶದ ಶರಿಯತ್‌ಪುರ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ ಎಂದು ಹೇಳಲಾಗಿದೆ. ಈ ದಾಳಿಯ ಕ್ರೌರ್ಯವು ಹಕ್ಕುಗಳ ಗುಂಪುಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

ಢಾಕಾ, ಜನವರಿ 1: ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಇದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಇದು ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ನಡೆದ ಮತ್ತೊಂದು ಆತಂಕಕಾರಿ ದಾಳಿಯಾಗಿದೆ. ಡಿಸೆಂಬರ್ 31ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷವು ಆತಂಕಕಾರಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು 50 ವರ್ಷದ ಖೋಕೋನ್ ದಾಸ್ ಎಂದು ಗುರುತಿಸಲಾಗಿದೆ. ಅವರು ಮನೆಗೆ ಹಿಂತಿರುಗುತ್ತಿದ್ದಾಗ ದಾಳಿಕೋರರ ಗುಂಪೊಂದು ಅವರ ಮೇಲೆ ದಾಳಿ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More