ಹೆಂಡತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮತ್ತೊಬ್ಬ ವ್ಯಕ್ತಿಯ ಸಾವು, ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ
ರವಿವಾರದಂದು ಕುಟುಂಬದ ಸದಸ್ಯರೆಲ್ಲ ಆರಾಧನೆಗೆ ಅಂತ ಚರ್ಚ್ಗೆ ಹೋದಾಗ ಪೀಟರ್ ನೇಣು ಬಿಗಿದುಕೊಂಡಿದ್ದಾರೆ ಎಂದು ಸಂಬಂಧಿಕರೊಬ್ಬರು ಹೇಳುತ್ತಾರೆ. ಅವರ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ. ಹೆಂಡತಿ ನೀಡುತ್ತಿದ್ದ ಕಿರುಕುಳದಿಂದ ಸಾಯುತ್ತಿದ್ದೇನೆ, ನನ್ನ ಶವಪೆಟ್ಟಿಗೆಯ ಮೇಲೂ ಅದನ್ನು ಬರೆಸಬೇಕೆಂದು ಅವರು ನೋಟ್ನಲ್ಲಿ ಬರೆದಿರುವ ಕಾರಣ ಅವರ ಆಸೆಯನ್ನು ನೆರವೇರಿಸಲಾಗಿದೆ.
ಹುಬ್ಬಳ್ಳಿ: ನಗರದಲ್ಲಿ ಪೀಟರ್ ಎನ್ನುವ ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಪೀಟರ್ ತಾಯಿ ವೆಂಕಮ್ಮ ಹೇಳುವ ಪ್ರಕಾರ ವೃತ್ತಿಯಲ್ಲಿ ಟೀಚರ್ ಆಗಿರುವ ಸೊಸೆ (ಪಿಂಕಿ ಅಲಿಯಾಸ್ ಬೇಬಿ) ಕೊಡುತ್ತಿದ್ದ ಮಾನಸಿಕ ಕಿರುಕುಳದಿಂದಾಗಿ ಮಗ ಪ್ರಾಣ ಕಳೆದುಕೊಂಡಿದ್ದಾನೆ. ನಿಜಾಂಶ ಏನು ಅನ್ನೋದು ಪೊಲೀಸ್ ತನಿಖೆಯಿಂದ ಗೊತ್ತಾಗಬೇಕು. ಸೊಸೆಯ ಅನೈತಿಕ ಸಂಬಂಧದ ಬಗ್ಗೆಯೂ ವೆಂಕಮ್ಮ ದೂರುತ್ತಾರೆ. ಆ ವ್ಯಕ್ತಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ಬರುತ್ತಿದ್ದ ಎಂದು ಅವರು ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮದ್ವೆಯಾಗಿದ್ರೂ ಕಾಲೇಜು ವಿದ್ಯಾರ್ಥಿನಿ ಜತೆ ಲವ್: ವಿಡಿಯೋ ಮಾಡಿಟ್ಟು ಸಾವಿಗೆ ಶರಣಾದ ಪ್ರೇಮಿಗಳು
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
