ಹೆಂಡತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮತ್ತೊಬ್ಬ ವ್ಯಕ್ತಿಯ ಸಾವು, ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2025 | 10:24 AM

ರವಿವಾರದಂದು ಕುಟುಂಬದ ಸದಸ್ಯರೆಲ್ಲ ಆರಾಧನೆಗೆ ಅಂತ ಚರ್ಚ್​ಗೆ ಹೋದಾಗ ಪೀಟರ್ ನೇಣು ಬಿಗಿದುಕೊಂಡಿದ್ದಾರೆ ಎಂದು ಸಂಬಂಧಿಕರೊಬ್ಬರು ಹೇಳುತ್ತಾರೆ. ಅವರ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ. ಹೆಂಡತಿ ನೀಡುತ್ತಿದ್ದ ಕಿರುಕುಳದಿಂದ ಸಾಯುತ್ತಿದ್ದೇನೆ, ನನ್ನ ಶವಪೆಟ್ಟಿಗೆಯ ಮೇಲೂ ಅದನ್ನು ಬರೆಸಬೇಕೆಂದು ಅವರು ನೋಟ್​​ನಲ್ಲಿ ಬರೆದಿರುವ ಕಾರಣ ಅವರ ಆಸೆಯನ್ನು ನೆರವೇರಿಸಲಾಗಿದೆ.

ಹುಬ್ಬಳ್ಳಿ: ನಗರದಲ್ಲಿ ಪೀಟರ್ ಎನ್ನುವ ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಪೀಟರ್ ತಾಯಿ ವೆಂಕಮ್ಮ ಹೇಳುವ ಪ್ರಕಾರ ವೃತ್ತಿಯಲ್ಲಿ ಟೀಚರ್ ಆಗಿರುವ ಸೊಸೆ (ಪಿಂಕಿ ಅಲಿಯಾಸ್ ಬೇಬಿ) ಕೊಡುತ್ತಿದ್ದ ಮಾನಸಿಕ ಕಿರುಕುಳದಿಂದಾಗಿ ಮಗ ಪ್ರಾಣ ಕಳೆದುಕೊಂಡಿದ್ದಾನೆ. ನಿಜಾಂಶ ಏನು ಅನ್ನೋದು ಪೊಲೀಸ್ ತನಿಖೆಯಿಂದ ಗೊತ್ತಾಗಬೇಕು. ಸೊಸೆಯ ಅನೈತಿಕ ಸಂಬಂಧದ ಬಗ್ಗೆಯೂ ವೆಂಕಮ್ಮ ದೂರುತ್ತಾರೆ. ಆ ವ್ಯಕ್ತಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ಬರುತ್ತಿದ್ದ ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮದ್ವೆಯಾಗಿದ್ರೂ ಕಾಲೇಜು ವಿದ್ಯಾರ್ಥಿನಿ ಜತೆ ಲವ್: ವಿಡಿಯೋ ಮಾಡಿಟ್ಟು ಸಾವಿಗೆ ಶರಣಾದ ಪ್ರೇಮಿಗಳು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.