AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ರಾಜಾತಿಥ್ಯ ಪ್ರಕರಣ; ಇನ್ನೊಂದು ಫೋಟೊ ನಮಗೆ ಸಿಕ್ಕಿದೆ: ಬಿ ದಯಾನಂದ, ಪೊಲೀಸ್ ಆಯುಕ್ತ

ದರ್ಶನ್ ರಾಜಾತಿಥ್ಯ ಪ್ರಕರಣ; ಇನ್ನೊಂದು ಫೋಟೊ ನಮಗೆ ಸಿಕ್ಕಿದೆ: ಬಿ ದಯಾನಂದ, ಪೊಲೀಸ್ ಆಯುಕ್ತ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 30, 2024 | 1:40 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ರನ್ನು ಅವಸರದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ದರ್ಶನ್ ಸೇರಿದಂತೆ ಇತರ ಕೆಲ ಕೈದಿಗಳನ್ನು ಬೇರೆ ಜೈಲುಗಳಿಗೆ ಶಿಫ್ಟ್ ಮಾಡಿದೆ ಎಂದು ಮಾತಾಡಿಕೊಳ್ಳಲಾಗುತ್ತಿದೆ.

ಬೆಂಗಳೂರು: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು, ದರ್ಶನ್ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಫೋಟೋ ಸಿಕ್ಕಿರುವ ಮಾಹಿತಿಯನ್ನು ನೀಡಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ವಿಚಾರಾಧೀನ ಕೈದಿಗಳ ವಿರುದ್ಧ ಎರಡು ಪ್ರಕರಣ ಮತ್ತು ಜೈಲು ಅಧಿಕಾರಿಗಳ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ, ನ್ಯಾಯಾಲಯದ ಅನುಮತಿ ಪಡೆದು ಮೂರು ಪ್ರಕರಣಗಳ ತನಿಖೆಯನ್ನು ಹಿರಿಯ ಅಧಿಕಾರಿಗಳಿಂದ ನಡೆಸಲಾಗುತ್ತಿದೆ ಎಂದು ದಯಾನಂದ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Darshan Arrest: ದರ್ಶನ್ ಬಂಧನ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಹೇಳಿದ್ದೇನು? ವಿಡಿಯೋ ನೋಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More