ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ; ಬಿಕ್ಕಿ ಬಿಕ್ಕಿ ಅತ್ತ ಕುಟುಂಬಸ್ಥರು
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದಿರುವ ಘಟನೆ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದಿರುವ ಘಟನೆ ಸಂಭವಿಸಿದೆ. ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದ್ವೀಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದು, ಈ ವೇಳೆ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆಯನ್ನು ಶರ್ಮಿಳಾ (30) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಾದೇಶನನ್ನು ಪೊಲೀಸರು ಬಂಧಿಸಿದ್ದಾರೆ. ಕುಟುಂಬದ ಸದಸ್ಯೆಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ;
Latest Videos