FIR ದಾಖಲಾದ ಬೆನ್ನಲ್ಲೇ ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್
ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್ ಆಗಿದೆ.
ತುಮಕೂರು, ಮಾ.17: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಕಳೆದ ಮಾ.4 ರಂದು ಗುಬ್ಬಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಸಿಡಿಪಿಓ ಮಹೇಶ್, ತಮ್ಮ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲರ ಎದುರೇ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದ ಶಾಸಕ. ಅವಾಚ್ಯ ಶಬ್ಧಗಳಿಂದಲೂ ಸರ್ಕಾರಿ ಅಧಿಕಾರಿಯನ್ನ ನಿಂದಿಸಿದ್ದರು. ಇದೀಗ ಸರ್ಕಾರಿ ಅಧಿಕಾರಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ