ಕೋಲಾರದಲ್ಲಿ ಪುಟಾಣಿ‌ ‌ಮಕ್ಕಳಿಂದ ಸ್ಕೇಟಿಂಗ್‌ ಮಾಡುವ ಮೂಲಕ‌ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 18, 2024 | 9:47 AM

ಇತ್ತಿಚೇಗೆ ಮಾದಕ ವಸ್ತು ಬಳಕೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ಈ ಪೀಡುಗಿಗೆ ಕಾಲೇಜು ವಿದ್ಯಾರ್ಥಿಗಳೇ ದಾಸರಾಗಿರುವುದು ದುರಂತ. ಈ ಹಿನ್ನಲೆ ಕೋಲಾರದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ನಡೆದಿದೆ.

ಕೋಲಾರ, ಫೆ.18: ಕೋಲಾರದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ಜರುಗಿದ್ದು, ಪುಟಾಣಿ‌ ‌ಮಕ್ಕಳು
ನಗರದೆಲ್ಲಡೆ ಸ್ಕೇಟಿಂಗ್‌ ಮಾಡುವ ಮೂಲಕ‌ ಅಭಿಯಾನ ನಡೆಸಿದ್ದಾರೆ. ಕೋಲಾರ(Kolar)ದ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೋಲಾರ ನಗರದ ಕುವೆಂಪು ಪಾರ್ಕ್​ನಿಂದ ಆರಂಭವಾದ ಈ ಜಾತಾ, ನಗರದ ಪ್ರಮುಖ‌ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಕಾರ್ಯಕ್ರಮಕ್ಕೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಅವರು ಚಾಲನೆ ನೀಡಿದ್ದು ವಿಶೇಷವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More