Anti-paper leak Bill 2026 Live Video: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ

Edited By:

Updated on: Jul 27, 2026 | 11:48 AM

ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026' ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದೆ. ಈ ಹೊಸ ಕಾಯ್ದೆಯು ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಗುರಿ ಹೊಂದಿದೆ. ಸಿಬ್ಬಂದಿ ಮತ್ತು ತರಬೇತಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇದನ್ನು ಮಂಡಿಸಲಿದ್ದಾರೆ. ಇದು ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಬದ್ಧವಾಗಿದೆ.

ದೆಹಲಿ, ಜು.27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 27, 2026 11:38 AM
Follow Us