AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿ ಮಾತೇ ಬರದೆ ನಿಂತ ಅನುಪಮ್ ಖೇರ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿ ಮಾತೇ ಬರದೆ ನಿಂತ ಅನುಪಮ್ ಖೇರ್

 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Oct 06, 2025 | 11:04 AM

Share

ಅನುಪಮ್ ಖೇರ್ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಸಿನಿಮಾ ನೋಡಿ ಅವರಿಗೆ ಮಾತೇ ಬರುತ್ತಿಲ್ಲ. ಈ ಸಂದರ್ಭದ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಹೊಂಬಾಳೆ ಈ ವಿಡಿಯೋನ ಹಂಚಿಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ಗಮನ ಸೆಳೆಯುತ್ತಿದೆ. ದೇಶ-ವಿದೇಶದ ಪ್ರೇಕ್ಷಕರು ಸಿನಿಮಾ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ನೋಡಿದ ಅನುಪಮ್ ಖೇರ್ ಅವರು ತಮ್ಮ ಅಭಿಪ್ರಾಯವನ್ನು ವಿಡಿಯೋ ಮಾಡಿ ರಿಷಬ್ ಶೆಟ್ಟಿಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಅವರು ರಿಷಬ್​ನ ಹೊಗಳಿದ್ದಾರೆ. ‘ಪ್ರೀತಿಯ ರಿಷಬ್, ನಾನು ಕಾಂತಾರ ನೋಡಿ ಬಂದೆ. ಮಾತೇ ಬರುತ್ತಿಲ್ಲ’ ಎಂದು ಹೇಳಿದ್ದು ವಿಡಿಯೋದಲ್ಲಿ ಕಾಣಿಸಿದೆ. ಹೊಂಬಾಳೆ ಫಿಲ್ಮ್ಸ್ ಈ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.