‘ನಿಮ್ಮದು ಚಾರ್ಮಿಂಗ್ ಸ್ಮೈಲ್​’; ಶಿವರಾಜ್​ಕುಮಾರ್ ಅವರನ್ನು ಹೊಗಳಿದ ಬಾಲಿವುಡ್ ನಟ ಅನುಪಮ್ ಖೇರ್

Updated on: Mar 30, 2023 | 9:00 AM

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಕೂಡ ನಟಿಸುತ್ತಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಕೂಡ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಅನುಪಮ್ ಖೇರ್ ಅವರು ಶಿವರಾಜ್​ಕುಮಾರ್ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ಶಿವರಾಜ್​ಕುಮಾರ್ ಅವರ ಜೊತೆ ನಟಿಸುತ್ತಿರೋದು ಖುಷಿ ನೀಡುತ್ತಿದೆ. ಅವರದ್ದು ಚಾರ್ಮಿಂಗ್ ಸ್ಮೈಲ್’ ಎಂದು ಅನುಪಮ್ ಖೇರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More