ತಾಯಿ ಚೆನ್ನಮ್ಮ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ಅವರ ಅಂತಿಮ ಸಂಸ್ಕಾರ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ. ಈ ದುಃಖದ ಸಂದರ್ಭದಲ್ಲಿ, ಚೆನ್ನಮ್ಮ ಅವರ ಪುತ್ರಿ ಅನಸೂಯಾ ಅವರು ತಮ್ಮ ತಾಯಿಯ ಪಾರ್ಥಿವ ಶರೀರದ ಎದುರು ಓಂ ಶಾಂತಿ ಮತ್ತು ಮಹಾಮೃತ್ಯುಂಜಯ ಮಂತ್ರ ಸೇರಿದಂತೆ ಹಲವು ಶ್ಲೋಕಗಳನ್ನು ಪಠಿಸುವ ಮೂಲಕ ಭಾವಪೂರ್ಣ ವಿದಾಯ ಹೇಳಿದ್ದಾರೆ.
ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದಿಂದ ದೇವೇಗೌಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನಡೆಯಲಿದ್ದು, ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಅಂತಿಮ ದರ್ಶನದ ವೇಳೆ ಚೆನ್ನಮ್ಮ ಅವರ ಪುತ್ರಿ ಅನಸೂಯಾ ತಾಯಿಯ ಪಾರ್ಥಿವ ಶರೀರದ ಎದುರು ಶ್ಲೋಕಗಳನ್ನು ಪಠಿಸುವ ಮೂಲಕ ಭಾವುಕರಾದ ಪ್ರಸಂಗ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್ಕಪ್ ಫೈನಲ್ ವೀಕ್ಷಿಸಿದ ಮೋಹನ
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!

