ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆ ಶಿವಕುಮಾರ್ ಚರ್ಚೆ, ಕ್ರಮದ ಭರವಸೆ

Updated on: Aug 04, 2026 | 2:28 PM

ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ನೇಮಕಾತಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. 101 ಸೀಟುಗಳ ಭರ್ತಿ ಹಾಗೂ 15% ಕೋಟಾ ಕುರಿತ ವಿದ್ಯಾರ್ಥಿಗಳ ಅಳಲನ್ನು ಆಲಿಸಿದ ಸಿಎಂ, ನ್ಯಾಯ ಒದಗಿಸುವ ಮತ್ತು ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ.

ಬೆಂಗಳೂರು, ಆಗಸ್ಟ್​​ 04: ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, 101 ಸೀಟುಗಳ ಭರ್ತಿಯಲ್ಲಿನ ಅನ್ಯಾಯ ಮತ್ತು 15% ಕೋಟಾ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಸಿಎಂ ಅವರ ಮುಂದಿಟ್ಟಿದ್ದು, ಕಳೆದ 10 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More