Anna Bhagya Scheme; ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿ ಬಿಟ್ಟು ಪ್ರತ್ಯೇಕವಾಗಿ 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಜನರಿಗೆ ನೀಡಬೇಕು: ಪ್ರತಾಪ್ ಸಿಂಹ
ಜನರಿಗೆ 10 ಕೆಜಿ ಅಕ್ಕಿ ಕೊಡೋದು ಸಾಧ್ಯವಿದ್ದರೆ ಬಿಜೆಪಿಯೇ ಹಾಗೆ ಘೋಷಣೆ ಮಾಡಿ ಅಧಿಕಾರಕ್ಕೆ ಬರುತಿತ್ತು ಎಂದು ಪ್ರತಾಪ್ ಸಿಂಹ ಹೇಳಿದರು.
ಮೈಸೂರು: ಸಂಸದ ಪ್ರತಾಪ್ ಸಿಂಹ (Pratap Simha) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಡುವೆ ವಾಕ್ಸಮರ ಮುಂದುವರಿದಿದೆ. ಇಂದು ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಂಸದ, ರಾಜ್ಯದಲ್ಲಿ ಪಡಿತರ ಚೀಟಿ (ration card ) ಹೊಂದಿರುವವರಿಗೆ 5 ಕೆಜಿ ಅಕ್ಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊಡುತ್ತಿರುವ ಸಂಗತಿಯನ್ನು ಒಪ್ಪಿಕೊಂಡಿರುವುದಕ್ಕೆ ವ್ಯಂಗ್ಯಭರಿತ ಧ್ವನಿಯಲ್ಲಿ ಧನ್ಯವಾದ ಸಲ್ಲಿಸಿದರು. ಮುಂದುವರಿದು ಮಾತಾಡಿದ ಸಂಸದ, ಜನರಿಗೆ 10 ಕೆಜಿ ಅಕ್ಕಿ ಕೊಡೋದಾದ್ರೆ ಬಿಜೆಪಿಯೇ ಹಾಗೆ ಘೋಷಣೆ ಮಾಡಿ ಅಧಿಕಾರಕ್ಕೆ ಬರುತಿತ್ತು ಎಂದರು. ಅಸಲಿಗೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಹೊರತುಪಡಿಸಿ ಪ್ರತ್ಯೇಕವಾಗಿ 10 ಕೆಜಿ ಅಕ್ಕಿಯನ್ನು ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಬೇಕು. ಅವರು ಜನರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಭರವಸೆ ನೀಡಿದ್ದಾರೆ, ಅದರಲ್ಲಿ ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿ ಸೇರುವುದಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ