ದಿಢೀರನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭೇಟಿಗೆ ಬಂದ ಎಪಿಸಿಸಿ ಅಧ್ಯಕ್ಷೆ ಶರ್ಮಿಳಾ ರೆಡ್ಡಿ!

ಅರುಣ್​ ಕುಮಾರ್​ ಬೆಳ್ಳಿ

Updated on: Apr 10, 2024 | 1:42 PM

ಆಂಧ್ರಪ್ರದೇಶದಲ್ಲಿ ತಮ್ಮ ಸಹೋದರನ ವಿರುದ್ಧ ಒಂದು ದೊಡ್ಡ ಶಕ್ತಿಯಾಗಿ ಬೆಳೆದಿರುವ ಶರ್ಮಿಳಾ ಇದೇ ವರ್ಷ ಜನೆವರಿ ತಿಂಗಳು ಮೊದಲ ವಾರದಲ್ಲಿ ರಾಹುಲ್ ಗಾಂಧಿಯವರ ಸಮ್ಮುಖ ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರು ಪಕ್ಷಕ್ಕೆ ಸೇರಿದ ಕೂಡಲೇ ಎಐಸಿಸಿ ಅವರನ್ನು ಆಂದ್ರಪ್ರದೇಶ ಕಾಂಗ್ರೆಸ್ ಘಟಕದ ಉಸ್ತುವಾರಿಯನ್ನು ವಹಿಸಿಕೊಟ್ಟಿತ್ತು.

ಬೆಂಗಳೂರು: ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಮತ್ತು ಅಲ್ಲಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಕಿರಿಯ ಸಹೋದರಿಯಾಗಿರುವ ವೈ ಎಸ್ ಶರ್ಮಿಲಾ ರೆಡ್ಡಿ (YS Sharmila Reddy) ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ಆಗಮಿಸಿದರು. ದಿಢೀರ್ ಭೇಟಿಗೆ ಕಾರಣವೇನು ಅನ್ನೋದು ಇನ್ನೂ ಗೊತ್ತಿಲ್ಲ. ಆಂಧ್ರಪ್ರದೇಶದಲ್ಲಿ ತಮ್ಮ ಸಹೋದರನ ವಿರುದ್ಧ ಒಂದು ದೊಡ್ಡ ಶಕ್ತಿಯಾಗಿ ಬೆಳೆದಿರುವ ಶರ್ಮಿಳಾ ಇದೇ ವರ್ಷ ಜನೆವರಿ ತಿಂಗಳು ಮೊದಲ ವಾರದಲ್ಲಿ ರಾಹುಲ್ ಗಾಂಧಿಯವರ ಸಮ್ಮುಖ ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರು ಪಕ್ಷಕ್ಕೆ ಸೇರಿದ ಕೂಡಲೇ ಎಐಸಿಸಿ ಅವರನ್ನು ಆಂದ್ರಪ್ರದೇಶ ಕಾಂಗ್ರೆಸ್ ಘಟಕದ ಉಸ್ತುವಾರಿಯನ್ನು ವಹಿಸಿಕೊಟ್ಟಿತ್ತು. ಕಾಂಗ್ರೆಸ್ ಸೇರುವ ಮೊದಲು ಶರ್ಮಿಳಾ ಯುವಜನ ಶ್ರಮಿಕ ರೈತು ತೆಲಂಗಾಣ ಪಕ್ಷವನ್ನು ಸ್ಥಾಪಿಸಿ ಆಂಧ್ರಪ್ರದೇಶದ ಜೊತೆ ತೆಲಂಗಾಣಲ್ಲೂ ಪಕ್ಷ ಸಂಘಟನೆಯ ಕೆಲಸ ಮಾಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕುಮಾರಸ್ವಾಮಿ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಕನಸು ಕಾಣೋದ್ರಲ್ಲಿ ತಪ್ಪೇನೂ ಇಲ್ಲ: ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.