ಅಪೆಕ್ಸ್ ಬ್ಯಾಂಕ್ ಪಟ್ಟಕ್ಕೆ ಪೈಪೋಟಿ: ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ

Updated on: Sep 08, 2026 | 6:39 PM

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ. ಸದ್ಯ ಶತಾಗತಯಾಗಿ ಅಪೆಕ್ಸ್ ಬ್ಯಾಂಕ್​​​ಗೆ ಮತ್ತೊಮ್ಮೆ ಅಧ್ಯಕ್ಷರಾಗಲು ಕೆಎನ್ ರಾಜಣ್ಣ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ದೆಹಲಿಯಲ್ಲಿ ಇಂದು (ಸೆಪ್ಟೆಂಬರ್ 08) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ಸೆಪ್ಟೆಂಬರ್ 08): ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ. ಸದ್ಯ ಶತಾಗತಯಾಗಿ ಅಪೆಕ್ಸ್ ಬ್ಯಾಂಕ್​​​ಗೆ ಮತ್ತೊಮ್ಮೆ ಅಧ್ಯಕ್ಷರಾಗಲು ಕೆಎನ್ ರಾಜಣ್ಣ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ದೆಹಲಿಯಲ್ಲಿ ಇಂದು (ಸೆಪ್ಟೆಂಬರ್ 08) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಚುನಾವಣೆ ಮಹತ್ವ ಪಡೆದುಕೊಂಡಿರುವುದಕ್ಕೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಪ್ರಯತ್ನದ ವೇಳೆ ಡಿ ಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ಉಂಟಾಗಿದ್ದ ರಾಜಕೀಯ ಸಂಘರ್ಷವೂ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More