ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚುನಾವಣೆ ಮುಂದೂಡಿಕೆ
ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಡಿಸಿಎಂ ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಇಂದು (ಜನವರಿ 29) ನಡೆಯಬೇಕಿದ್ದ ಅಪೆಕ್ಸ್ ಬ್ಯಾಂಗ್ ಅಧ್ಯಕ್ಷ ಚುನಾವಣೆ ಮುಂದೂಡಲಾಗಿದೆ.
ತುಮಕೂರು, (ಜನವರಿ 29): ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ (Apex bank chairman election) ಈಗ ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಡಿಸಿಎಂ ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಇಂದು (ಜನವರಿ 29) ನಡೆಯಬೇಕಿದ್ದ ಅಪೆಕ್ಸ್ ಬ್ಯಾಂಗ್ ಅಧ್ಯಕ್ಷ ಚುನಾವಣೆ ಮುಂದೂಡಲಾಗಿದೆ. ಇನ್ನು ಈ ಬ್ಯಾಂಕ್ ಚುನಾವಣೆಯಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದಂತಿದೆ. ಹೌದು..ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇದರಲ್ಲಿ ಎಂಟ್ರಿಯಾಗಿದ್ದು, ಇದಕ್ಕೆ ವಿಧಾನಪರಿಷತ್ ಸದಸ್ಯ, ರಾಜಣ್ಣನವರ ಪುತ್ರ ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದರೆ, ಇನ್ನು ಈ ಬಗ್ಗೆ ರಾಜೇಂದ್ರ ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
