ಲೋಕಸಭಾ ಚುನಾವಣೆಯಲ್ಲಿ ಖಚಿತ ಸೋಲಿನ ಭೀತಿಯಿಂದ ಕಾಂಗ್ರೆಸ್ ಜನರನ್ನು ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದೆ: ಬಿವೈ ವಿಜಯೇಂದ್ರ
ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್-ಮೂರು ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿದ ಪ್ರಚಂಡ ಗೆಲುವು ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಬಳಿಕ ದೇಶದೆಲ್ಲೆಡೆ ಬಿಜೆಪಿ ಅಲೆ ಸುನಾಮಿಯಂತೆ ಎದ್ದಿರುವುದು ಕಾಂಗ್ರೆಸ್ ನಾಯಕರನ್ನು ಕಕ್ಕಾಬಿಕ್ಕಿಯಾಗಿಸಿದೆ ಎಂದು ವಿಜಯೇಂದ್ರ ಹೇಳಿದರು.
ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha polls) ಘೋಷಣೆ ಯಾಗುವ ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಬೀಗುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ (Congress party) ವಾಸ್ತವಾಂಶದ ಅರಿವಾಗಿದೆ. ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್-ಮೂರು ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿದ ಪ್ರಚಂಡ ಗೆಲುವು ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಬಳಿಕ ದೇಶದೆಲ್ಲೆಡೆ ಬಿಜೆಪಿ ಅಲೆ ಸುನಾಮಿಯಂತೆ ಎದ್ದಿರುವುದು ಕಾಂಗ್ರೆಸ್ ನಾಯಕರನ್ನು ಕಕ್ಕಾಬಿಕ್ಕಿಯಾಗಿಸಿದೆ. ಹಾಗಾಗೇ, ಪಕ್ಷದ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸುತ್ತೇವೆಂದು ಜನರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ವಿಜಯೇಂದ್ರ ಹೇಳಿದರು. ಆದರೆ ಜನರಿಗೆ ಅನ್ಯಾಯವಾಗಲು ಬಿಜೆಪಿ ಬಿಡಲ್ಲ, ಸರ್ಕಾರದ ಕಿವಿಹಿಂಡಿ ಸರಿದಾರಿಗೆ ತರುತ್ತೇವೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ