ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ

Updated on: Mar 17, 2026 | 11:39 AM

ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು ಜನ್ಮದಿನ. ಈ ವಿಶೇಷ ದಿನದಂದು ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಪುನೀತ್ ಅವರ ಸಮಾಧಿಗೆ ಆಗಮಿಸಿದ ಕುಟುಂಬದವರು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪುನೀತ್ ರಾಜ್​​​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಆದರೆ, ಅವರ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದೇ ವೇಳೆ ಕುಟುಂಬದವರು ಪುನೀತ್ ಸ್ಮಾರಕದ ಬಳಿ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಅಪ್ಪುನ ನೆನಪಿಸಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಈ ದೃಶ್ಯವನ್ನು ನೋಡಿ ಭಾವುಕರಾಗಿದ್ದಾರೆ. ಅಪ್ಪು ಇಂದು ನಮ್ಮ ಜೊತೆ ಇರಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More