ಪುನೀತ್ ನಿಧನರಾಗಿ 5 ತಿಂಗಳು, ಕುಟುಂಬ ಸದಸ್ಯರಿಂದ ಪೂಜೆ ಸಲ್ಲಿಕೆ; ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸಿದ ಆರ್ಜಿವಿ
Puneeth Rajkumar: ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ 5 ತಿಂಗಳು ಕಳೆದಿದ್ದು, ಕುಟುಂಬ ಸದಸ್ಯರು ಇಂದು ಪೂಜೆ ಸಲ್ಲಿಸಿದ್ದಾರೆ. ಸಮಾಧಿಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿದ್ದು, ನಮನ ಸಲ್ಲಿಸಿದ್ದಾರೆ.
ಬೆಂಗಳೂರು: ಪುನೀತ್ ರಾಜ್‌ಕುಮಾರ್ (Puneeth Rajkumar) ನಿಧನರಾಗಿ ಇಂದಿಗೆ 5 ತಿಂಗಳು ಕಳೆದಿದ್ದು, ಕುಟುಂಬ ಸದಸ್ಯರು ಇಂದು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ಪುತ್ರಿ ವಂದಿತಾ ರಾಘವೇಂದ್ರ ರಾಜ್‌ಕುಮಾರ್, ಕುಟುಂಬಸ್ಥರಿಂದ ಪೂಜೆ ಸಲ್ಲಿಸಲಾಗಿದೆ. ಇಂದು ಪುನೀತ್ ಅವರ ಸಮಾಧಿಗೆ ಭೇಟಿ ಟಾಲಿವುಡ್ ಹಾಗೂ ಬಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ (Ram Gopal Varma) ವರ್ಮಾ ಭೇಟಿ ನೀಡಿ, ಪುನೀತ್ಗೆ ನಮನ ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ರಾಮ್ ಗೋಪಾಲ್ ವರ್ಮಾ, ‘‘ಪುನೀತ್ ಒಬ್ಬ ಒಳ್ಳೆ ನಟ ಮಾತ್ರ ಅಲ್ಲ. ಒಬ್ಬ ಒಳ್ಳೆ ವ್ಯಕ್ತಿ ಕೂಡ ಆಗಿದ್ದರು. ಕಿಲ್ಲಿಂಗ್ ವೀರಪ್ಪನ್ ಚಿತ್ರೀಕರಣದ ಸಮಯದಲ್ಲಿ ಎರಡು ಭಾರಿ ಭೇಟಿಯಾಗಿದ್ದೆ’’ ಎಂದು ನುಡಿದಿದ್ದಾರೆ. ಅಪ್ಪು ಸಮಾಧಿಗೆ ನಮನ ಸಲ್ಲಿಸಿದ ನಂತರ ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿಗೂ ಆರ್ಜಿವಿ ನಮನ ಸಲ್ಲಿಸಿದ್ದಾರೆ.
ಇದನ್ನೂ ಓದಿ:
KGF 2: ಅಧೀರನ ಫ್ಯಾನ್ ಅಂತೆ ರಾಕಿ! ಸಂಜಯ್ ದತ್ ಬಗ್ಗೆ ಯಶ್ ವಿಶೇಷ ಮಾತು
Published on: Mar 29, 2022 10:24 AM
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

